Uncategorized

ಬೆಳಗಾವಿಯಲ್ಲಿ ವರುಣನ ಆರ್ಭಟ: ಆರ್.ಟಿ.ಓ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆಟೋ ಮೇಲೆ ಉರುಳಿದ ಬೃಹತ್ ಮರ, ವಾಹನ ಜಖಂ!

Share

ಬೆಳಗಾವಿ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುಗಡೆಯಿಲ್ಲದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಆರ್.ಟಿ.ಓ ಕಚೇರಿ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಆಟೋ ರಿಕ್ಷಾ ಮೇಲೆ ಬೃಹತ್ ಮರವೊಂದು ದಿಢೀರ್ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.


ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹೊಡೆತಕ್ಕೆ ಆರ್.ಟಿ.ಓ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಬದಿಯಲ್ಲಿದ್ದ ದೊಡ್ಡ ಮರವೊಂದು ಆಟೋ ರಿಕ್ಷಾ ಮೇಲೆ ಮಗುಚಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲ ಕಾಲ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಘಟನೆ ತಿಳಿಯುತ್ತಿದ್ದಂತೆಯೇ ಸಂಚಾರಿ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳೀಯ ಸಾರ್ವಜನಿಕರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ಮರ ಕತ್ತರಿಸುವ ಯಂತ್ರಗಳ ಮೂಲಕ ರಸ್ತೆಗೆ ಉರುಳಿದ್ದ ಮರವನ್ನು ತೆರವುಗೊಳಿಸಲು ಹರಸಾಹಸ ಪಟ್ಟರು. ನಗರದಲ್ಲಿ ಮಳೆ ಮುಂದುವರಿದಿರುವುದರಿಂದ ಹಳೆಯ ಮರಗಳಿರುವ ರಸ್ತೆಯಲ್ಲಿ ಸಾರ್ವಜನಿಕರು ಜಾಗರೂಕತೆಯಿಂದ ಸಂಚರಿಸಬೇಕೆಂದು ಮಹಾನಗರ ಪಾಲಿಕೆ ಹಾಗೂ ಪೊಲೀಸರು ಮನವಿ ಮಾಡಿದ್ದಾರೆ.

Tags:

error: Content is protected !!