Khanapur

ಅಂಬೋಲಿ ಘಾಟ್‌ನಲ್ಲಿ ಭೀಕರ ಭೂಕುಸಿತ; ಕ್ಷಣಾರ್ಧದಲ್ಲಿ ಪಾರಾದ ಪ್ರಯಾಣಿಕರು, ಹೆದ್ದಾರಿ ಸಂಚಾರ ಸಂಪೂರ್ಣ ಬಂದ್!

Share

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅಂಬೋಲಿ ಘಾಟ್‌ನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಗುಡ್ಡದ ಮೇಲಿಂದ ಬೃಹತ್ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬಿದ್ದಿದ್ದು, ವಾಹನ ಸವಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಘಾಟ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಬೆಳಗಾವಿ-ವೆಂಗುರ್ಲಾ ರಾಜ್ಯ ಹೆದ್ದಾರಿಯ ಅಂಬೋಲಿ ಘಾಟ್‌ನಲ್ಲಿ ಬೃಹತ್ ಬಂಡೆಗಲ್ಲುಗಳು ರಸ್ತೆಗೆ ಕುಸಿದು ಬಿದ್ದಿವೆ. ಮಹಾರಾಷ್ಟ್ರ ಸಾರಿಗೆ ಬಸ್ ಹಾಗೂ ಕಾರುಗಳು ಪಾಸ್ ಆಗುತ್ತಿದ್ದ ನಿಖರ ಸಮಯದಲ್ಲೇ ಈ ಬಂಡೆಗಳು ಉರುಳಿದ್ದು, ಅದೃಷ್ಟವಶಾತ್ ಕ್ಷಣಾರ್ಧದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸದ್ಯ ಜೆಸಿಬಿ ಯಂತ್ರಗಳ ಮೂಲಕ ಹೆದ್ದಾರಿಯಲ್ಲಿ ಬಿದ್ದಿರುವ ಬಂಡೆಗಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಯುದ್ಧೋಪಾದಿಯಲ್ಲಿ ಸಾಗುತ್ತಿದ್ದು, ಘಾಟ್ ಪ್ರದೇಶದಲ್ಲಿ ಭೂಕುಸಿತದ ಭೀತಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಹೈ ಅಲರ್ಟ್ ಘೋಷಿಸಲಾಗಿದೆ.

Tags:

error: Content is protected !!