Chikkodi

ನಸಲಾಪೂರ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

Share

ಲೋಕಸಭಾ ವ್ಯಾಪ್ತಿಯ ರಾಯಬಾಗ ತಾಲೂಕಿನ ನಸಲಾಪೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಅಂದಾಜು 70 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ನಾಯಿಕ ಸಮಾಜದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದರು, ರಾಯಬಾಗ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಈಗಾಗಲೇ 3 ಇಂದಿರಾ ಕ್ಯಾಂಟಿನ್‌ಗಳನ್ನು ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವುದು ನಮ್ಮ ಆದ್ಯತೆಯಾಗಿದೆ‌ ಎಂದರು.
ಜನರ ಸುಗಮ ರಸ್ತೆ ಸಂಚಾರಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಅಂದಾಜು 70 ಲಕ್ಷ ವೆಚ್ಚದಲ್ಲಿ ನಾಯಿಕ ಸಮಾಜದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಹಾವೀರ ಮೊಹಿತೆ,ಡಾ. ಎನ್. ಎ. ಮಗದುಮ್ಮ,ಅರ್ಜುನ ನಾಯಿಕವಾಡಿ, ಶಿವು ಪಾಟೀಲ,ದಿಲೀಪ ಜಮಾದಾರ, ಖಾಜಿ ಮುಲ್ಲಾ, ನಿರ್ಮಲಾ ಪಾಟೀಲ, ಅಬ್ದುಲ್ ತಾಂಬಟ, ಸತ್ತಾರ್ ಮುಲ್ಲಾ, ಮಜೀಬ ಸಯ್ಯದ್, ಶ, ಅಜಿತ ಪಾಟೀಲ, ಅಣ್ಣಪ್ಪ ಸಮಾಜೆ, ರವೀಂದ್ರ ಮಗದುಮ್ಮ ಗೊಟು ಪಾಟೀಲ, ಜ್ಯೋತಿ ಕಮಪಟ್ಟಿ, ಮಾರುತಿ ನಾಯ್ಕ, ಸಿದ್ದು ಬಂಡಗರ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ‌ಕಾರ್ಯಕರ್ತರು ಉಪಸ್ಥಿತರಿದ್ದರು.

Tags:

error: Content is protected !!