hubbali

ಹೆಲ್ಮೆಟ್‌ನಿಂದಲೇ ಹೆಂಡತಿಯ ಕೊಲೆ ಮಾಡಿದ ಪಾಪಿ ಪತಿ

Share

ಮದುವೆಯಾಗಿ ಇನ್ನೂ ಐದು ತಿಂಗಳೂ ಕಳೆದಿರಲಿಲ್ಲ. ಹೊಸ ಜೀವನದ ಕನಸು ಕಂಡಿದ್ದ ನವವಿವಾಹಿತೆಯ ಬದುಕು, ಪತಿಯ ಕೈಯಿಂದಲೇ ಭೀಕರ ಅಂತ್ಯ ಕಂಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ತಾರಿಹಾಳ ಗ್ರಾಮದಲ್ಲಿ ನಡೆದಿದೆ.

ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಹಳೆಮನಿ (19) ಕೊಲೆಯಾದ ದುರ್ದೈವಿ. ಪತಿ ಶಿವರಾಜ್ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾನೆ.

ಇಂದು ಬೆಳಿಗ್ಗೆ ಗಂಡ-ಹೆಂಡತಿ ನಡುವೆ ಆರಂಭವಾದ ಮಾತಿನ ಚಕಮಕಿ ಕ್ಷಣಾರ್ಧದಲ್ಲೇ ವಿಕೋಪಕ್ಕೆ ತಿರುಗಿದೆ. ಆಕ್ರೋಶಗೊಂಡ ಶಿವರಾಜ್, ಹೆಲ್ಮೆಟ್‌ನಿಂದ ನಾಗರತ್ನ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಕಳೆದ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿಯ ಸಂಸಾರ ಕೇವಲ ಐದು ತಿಂಗಳಲ್ಲೇ ರಕ್ತದ ಮಡುವಿನಲ್ಲಿ ಅಂತ್ಯ ಕಂಡಿದೆ. ಈ ಘಟನೆ ತಾರಿಹಾಳ ಗ್ರಾಮದಲ್ಲಿ ಆತಂಕ ಮತ್ತು ಶೋಕದ ವಾತಾವರಣ ಸೃಷ್ಟಿಸಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ತನಿಖೆ ಬಳಿಕವೇ ಗೊತ್ತಾಗಲಿದೆ.

Tags:

error: Content is protected !!