Chikkodi

ಕೃಷ್ಣಾ ನದಿಗೆ ಹೆಚ್ಚಿದ ಒಳಹರಿವು; ಕಲ್ಲೋಳ ಗ್ರಾಮದ ದತ್ತ ಮಂದಿರ ಜಲಾವೃತ

Share

ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಕರ್ನಾಟಕದ ಗಡಿ ಭಾಗದ ನದಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಹರಿಯುವ ಕೃಷ್ಣಾ ನದಿಯ ತೀರದಲ್ಲಿರುವ ದತ್ತ ಮಂದಿರವು ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೊಂಕಣ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ.
ಸದ್ಯ ಕೃಷ್ಣಾ ನದಿಗೆ ಬರೋಬ್ಬರಿ 1 ಲಕ್ಷ 35 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದ್ದು, ನದಿಯ ನೀರಿನ ಮಟ್ಟ ಗಂಟೆಯಿಂದ ಗಂಟೆಗೆ ಹೆಚ್ಚಾಗುತ್ತಿದೆ.

ಕಲ್ಲೋಳ ಗ್ರಾಮದ ಕೃಷ್ಣಾ ನದಿ ತೀರದ ಪ್ರಸಿದ್ಧ ದತ್ತ ಮಂದಿರದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನವು ಜಲಾವೃತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ಹಾಗೂ ಭಕ್ತಾದಿಗಳಿಗೆ ದತ್ತಾತ್ರೇಯ ದೇವರ ದರ್ಶನವನ್ನು ಸದ್ಯಕ್ಕೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಪ್ರವಾಸಿಗರು ನದಿತೀರದಲ್ಲಿ ಭೇಟಿ ನೀಡುವುದನ್ನು ತಡೆಯಲು ನದಿ ತೀರದುದ್ದಕ್ಕೂ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ. ನದಿಯ ಹತ್ತಿರ ಯಾರೂ ಹೋಗದಂತೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.

ಡಿ.ಕೆ.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ

Tags:

error: Content is protected !!