Belagavi

ಸಿಎಂ ಆಗಿ ಡಿ.ಕೆ.ಶಿವಕುಮಾರ್ ಮೊದಲ ಬಾರಿ ಬೆಳಗಾವಿಗೆ ಭೇಟಿ; ಶಾಸಕರಿಗೆ ಔತಣಕೂಟ

Share

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿರುವ ಡಿ.ಕೆ. ಶಿವಕುಮಾರ್ ಅವರು, ನಗರದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಪ್ರಮುಖ ನಾಯಕರಿಗಾಗಿ ಹಮ್ಮಿಕೊಂಡಿದ್ದ ವಿಶೇಷ ಔತಣಕೂಟ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ಹೈಪ್ರೊಫೈಲ್ ಡಿನ್ನರ್ ಮೀಟಿಂಗ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರಮುಖವಾಗಿ ಭಾಗವಹಿಸಿದ್ದರು. ಇವರೊಂದಿಗೆ ಶಾಸಕರುಗಳಾದ ರಾಜು ಕಾಗೆ, ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ ಮಾನೆ, ಯಾಸೀರ್ ಖಾನ ಪಠಾಣ್, ಅಶೋಕ ಪಟ್ಟಣ್, ಬಾಬಾಸಾಹೇಬ್ ಪಾಟೀಲ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಎಂಎಲ್ಸಿ ಚೆನ್ನರಾಜ್ ಹಟ್ಟಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಸಿಎಂ ಆದ ಬಳಿಕ ಕುಂದಾನಗರಿಗೆ ಮೊದಲ ಬಾರಿಗೆ ಎಂಟ್ರಿ ಕೊಟ್ಟಿರುವ ಡಿಕೆಶಿ, ಈ ಔತಣಕೂಟದ ನೆಪದಲ್ಲಿ ಜಿಲ್ಲೆಯ ನಾಯಕರನ್ನು ಒಟ್ಟಿಗೆ ಸೇರಿಸಿ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Tags:

error: Content is protected !!