ಚಿಕ್ಕೋಡಿ ಭಾಗದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸಲು ನಾನು ಇಲ್ಲಿಗೆ ಬಂದಿದ್ದೇನೆ” ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೋಳಿ ತಿಳಿಸಿದ್ದಾರೆ.

ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಸ್ತುತ ರಾಜ್ಯದಲ್ಲಿ ಹಾಗೂ ವಿಶೇಷವಾಗಿ ಚಿಕ್ಕೋಡಿ ಭಾಗದಲ್ಲಿ ಈ ಬಾರಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಸದ್ಯಕ್ಕೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ನಮ್ಮದಾಗಿದೆ. ಮಳೆ ಕೊರತೆಯಿಂದಾಗಿ ಹಲವೆಡೆ ಬೆಳೆ ಹಾನಿಯಾಗಿರುವ ಬಗ್ಗೆ ದೂರುಗಳು ಬಂದಿವೆ. ಈ ಕುರಿತು ಸಮಗ್ರ ಜಂಟಿ ಸಮೀಕ್ಷೆ ನಡೆಸಬೇಕಾಗಿದ್ದು, ವರದಿ ಬಂದ ಬಳಿಕ ಪರಿಹಾರ ನೀಡುವ ಕುರಿತು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು.
ಬೆಳಗಾವಿ ಜಿಲ್ಲಾ ವಿಭಜನೆ ಹಾಗೂ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡುವ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಹಲವು ಬದಲಾವಣೆಗಳು ಆಗಲಿವೆ. ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಗಂಭೀರ ಚರ್ಚೆಗಳು ನಡೆದಿವೆ ಎಂದು ಸುಳಿವು ನೀಡಿದರು.
ಇದೇ ವೇಳೆ ಬೆಳಗಾವಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಭೆ ಹಾಗೂ ಅದರಿಂದ ಅನಾಹುತವಾಗಲಿದೆ ಎಂಬ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಲು ಸಚಿವರು ನಿರಾಕರಿಸಿದರು. ಆ ವಿಚಾರದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮುಂದೆ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.
ಖ್ಯಾತ ಗಾಯಕಿ ಗಾನ ಕೋಗಿಲೆ ಎಸ್. ಜಾನಕಿ ಅವರ ನಿಧನದ ವಾರ್ತೆಗೆ ತೀವ್ರ ಕರಳು ವ್ಯಕ್ತಪಡಿಸಿದ ಸಚಿವ ಸತೀಶ್ ಜಾರಕಿಹೋಳಿ ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕಿಯಾಗಿದ್ದರು. ಅವರ ನಿಧನದಿಂದ ಕರ್ನಾಟಕಕ್ಕೆ ಹಾಗೂ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಹೇಳಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿದರು.
