ಮಾದಕ ದ್ರವ್ಯಗಳ ವಿರುದ್ಧ ಕರ್ನಾಟಕ ಸರ್ಕಾರ ಹಮ್ಮಿಕೊಂಡಿರುವ ಅಭಿಯಾನದ ಅಂಗವಾಗಿ ‘ಆಪರೇಷನ್ ರೈಸ್’ ಹಾಗೂ ‘ಬೇಡ ಬ್ರೋ’ ಜಾಗೃತಿ ಅಭಿಯಾನಕ್ಕೆ ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಸಂದೀಪ್ ಪಾಟೀಲ್,ಅವರು ಬುಧವಾರ ವಿಜಯಪುರ ನಗರದ ಸಿಕ್ಯಾಬ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾದಕ ದ್ರವ್ಯಗಳು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತವೆ. ಯುವಜನರು ಹಾಗೂ ವಿದ್ಯಾರ್ಥಿಗಳು ಯಾವುದೇ ರೀತಿಯ ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೆಳಗಾವಿ ಉತ್ತರ ವಲಯದ ಐದು ಜಿಲ್ಲೆಗಳಲ್ಲಿ ‘ಆಪರೇಷನ್ ರೈಸ್’ ಹಾಗೂ ‘ಬೇಡ ಬ್ರೋ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಶಾಲಾ-ಕಾಲೇಜುಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಿಕ್ಯಾಬ್ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.
