ಕಳೆದ 30 ವರ್ಷದಿಂದ ವಿದ್ಯಾರ್ಥಿಯಿಂದಾಗ ಕಾಂಗ್ರೆಸ್ ಸೇರ್ಪಡೆಯಾಗಿ ಯುವ ಘಟಕ ಸೇರಿದಂತೆ 15 ವರ್ಷದಿಂದ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷನಾಗಿ ಸೇವೆ ಮಾಡಿದ್ದೇನೆ. ಈಗ ವಿಧಾನ ಪರಿಷತ್ ನಾಮನಿರ್ದೇಶಿತ ಸದಸ್ಯನ ಮಾಡಲು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ ಎಂದು ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷದ ವಿನಯ ನಾವಲಗಟ್ಟಿ ಹೇಳಿದರು.

ಶನಿವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಮಾಡಲು ಶ್ರಮಿಸಿದ್ದೇನೆ. ಕಳೆದ ನಾಲ್ಕು ದಶಕಗಳಿಂದ ಬೆಳಗಾವಿಗೆ ನಾಮನಿರ್ದೇಶಿತ ವಿಧಾನ ಪರಿಷತ್ತಿನ ಸ್ಥಾನಕ್ಕೆ ಯಾರನ್ನೂ ಆಯ್ಕೆ ಮಾಡಿಲ್ಲ. ನಾನು ಪಕ್ಷಕ್ಕೆ ಸಾಕ್ಷಷ್ಟು ಸೇವೆ ಮಾಡಿದ್ದೇನೆ. ಈ ಬಾರಿ ನಮಗೂ ಒಂದು ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ದೇನೆ ಎಂದರು.
