ಕಿತ್ತೂರು ಕರ್ನಾಟಕ ಭಾಗದಲ್ಲಿ ಎಸ್ಐಆರ್ ಪ್ರಕ್ರಿಯೆ ಉತ್ತಮವಾಗಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ಎಸ್ಸಿ/ಎಸ್ಟಿ ಮತದಾರರು ಇರುವ ಕಡೆ ನಿಗಾವಹಿಸಿ ಅವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಬೇಕು” ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕಿ ಅಂಜಲಿ ನಿಂಬಾಳಕರ್ ಕರೆ ನೀಡಿದ್ದಾರೆ.

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪದಾಧಿಕಾರಿಗಳ ಸಭೆಯ ಬಳಿಕ ಮಾಧ್ಯಮದವರು ಜೊತೆಗೆ ಮಾತನಾಡಿದ ಅವರು, 2028ರ ವಿಧಾನಸಭಾ ಹಾಗೂ 2029ರ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಬಿಎಲ್ಎಗಳು ಸಕ್ರಿಯವಾಗಿ ಕೆಲಸ ಮಾಡಬೇಕು ಮತ್ತು ಯಾರ ಹೆಸರೂ ಪಟ್ಟಿಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿ, ಬ್ಲಾಕ್ ಅಧ್ಯಕ್ಷರ ಅಭಿಪ್ರಾಯಗಳನ್ನು ಪಡೆದರು.
ಶಾಸಕ ಗಣೇಶ ಹುಕ್ಕೇರಿ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಅರ್ಜುನ ನಾಯಿಕವಾಡಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
