Vijaypura

ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ; ಮಳೆಯ ಕೊರತೆಗೆ ಕಬ್ಬು ಬೆಳೆ ಒಣಗಿ ದುರಂತ

Share

ಮಳೆಯ ಕೊರತೆಯಿಂದ ಬೆಳೆ ಕೈಕೊಟ್ಟು ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ. ಮೃತ ರೈತನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯ ರೈತರು ಆಗ್ರಹಿಸಿದ್ದಾರೆ.

ಇಂಡಿ ತಾಲೂಕಿನ ತಡವಲಗಾ ಗ್ರಾಮದ ನಾಗಪ್ಪ ಭೀಮಶ್ಯಾ ಅಥರ್ಗಾ (57) ಆತ್ಮಹತ್ಯೆ ಮಾಡಿಕೊಂಡ ರೈತ. ಗ್ರಾಮದ ತೋಟದ ವಸತಿಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತರು ಕೋಟಕ್ ಮಹೀಂದ್ರ ಬ್ಯಾಂಕ್‌ನಲ್ಲಿ ಸುಮಾರು ₹15 ಲಕ್ಷ, ತಡವಲಗಾ ಸಹಕಾರಿ ಸಂಘದಲ್ಲಿ ₹65 ಸಾವಿರ ಹಾಗೂ ಖಾಸಗಿಯಾಗಿ ಸುಮಾರು ₹5 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ.

ಮಳೆಯ ಕೊರತೆಯಿಂದ ಕಬ್ಬಿನ ಬೆಳೆ ಒಣಗಿ ಹೋಗಿದ್ದು, ಸಾಲ ಮರುಪಾವತಿ ಹೇಗೆ ಮಾಡುವುದು ಎಂಬ ಚಿಂತೆಯಿಂದ ಮನನೊಂದು ಈ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ. ಘಟನೆ ಕುರಿತು ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಈ ದುರ್ಘಟನೆಯ ಹಿನ್ನೆಲೆಯಲ್ಲಿ ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ, ಸಾಲ ಮನ್ನಾ ಹಾಗೂ ಕುಟುಂಬದ ಸದಸ್ಯರಿಗೆ ಅಗತ್ಯ ನೆರವು ನೀಡಬೇಕು ಎಂದು ರೈತರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:

error: Content is protected !!