Vijaypura

ರಾಮ ಮಂದಿರ ಹುಂಡಿ ಹಣ ದುರ್ಬಳಕೆ ಆರೋಪ: ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ

Share

ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿ ಹಣ ದುರ್ಬಳಕೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಆಗ್ರಹಿಸಿದರು. ವಿಜಯಪುರ ನಗರದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ರಾಮ ಮಂದಿರದಲ್ಲಿ ಸಾವಿರಾರು ಕೋಟಿ ರೂಪಾಯಿ ಹುಂಡಿ ಹಣದ ದುರ್ಬಳಕೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಟ್ರಸ್ಟ್ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು. ಮಂದಿರ ನಿರ್ಮಾಣಕ್ಕೆ ದೇಶದ ವಿವಿಧ ಭಾಗಗಳ ಜನರು ದೇಣಿಗೆ ನೀಡಿದ್ದು, ಈ ಹಣದ ಬಳಕೆ ಕುರಿತು ಪಾರದರ್ಶಕ ತನಿಖೆ ನಡೆಸಬೇಕಿದೆ ಎಂದರು. ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿರಲಿಲ್ಲ ಎಂದು ಅವರು ಹೇಳಿದರು.

ಮಂದಿರ ಟ್ರಸ್ಟ್‌ನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸಂಬಂಧಿತ ಪದಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ರಾಜೀನಾಮೆ ಪಡೆಯುವುದಷ್ಟೇ ಸಾಕಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ವಕ್ಫ್ ಸಂಸ್ಥೆಗಳಲ್ಲಿ ಮುಸ್ಲಿಮೇತರರನ್ನು ಸೇರಿಸುವ ಬಗ್ಗೆ ಸರ್ಕಾರ ಮಾತನಾಡುವಂತೆಯೇ, ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲೂ ಇತರ ಸಮುದಾಯದವರಿಗೂ ಅವಕಾಶ ನೀಡುವ ಬಗ್ಗೆ ಚರ್ಚೆಯಾಗಬೇಕು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಫಯಾಜ್ ಕಲಾದಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:

error: Content is protected !!