ಮ್ಯಾಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಾರ್ಡನ್ ಹಾಗೂ ಅಡುಗೆ ಸಹಾಯಕಿಯಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ವಿಜಯಪುರ ಬಸವನ ಬಾಗೇವಾಡಿ ಡಾ. ಬಿ ಆರ್ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರು ಹಾಸ್ಟೆಲ್ ವಾರ್ಡನ್, ಅಡುಗೆ ಸಹಾಯಕಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹಾಸ್ಟೆಲ್ ಗಾರ್ಡನ್ ಹಾಗೂ ಅಡುಗೆ ಸಹಾಯಕಿ ವಿನಾಕಾರಣ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ್ ವಿದ್ಯಾರ್ಥಿನಿಯರು ಅಳಲು ಆಲಿಸಿ, ಶಿಸ್ತುಕ್ರಮ ಕೈಗೊಳ್ಳುವ ಭರವಸೆ ನೀಡಿದ್ರು. ಬಳಿಕ ವಿದ್ಯಾರ್ಥಿನಿಯರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ.


