NEET ಪರೀಕ್ಷೆ ಅಕ್ರಮ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ಬಿಸಿಯೇರಿದೆ. ಸಿ.ಐ.ಟಿ.ಯು (C.I.T.U) ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಲಾಗಿದೆ.


ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ NEET ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಬೆಳಗಾವಿಯಲ್ಲಿ C.I.T.U ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ದೆಹಲಿಯಲ್ಲಿ ಸುಳ್ಳು ಆರೋಪಗಳನ್ನು ಹೊರಿಸಿ, ಪ್ರತಿಭಟನಾನಿರತರ ಮೇಲೆ ದಾಂಧಲೆ ನಡೆಸಿ ಪ್ರಜಾಪ್ರಭುತ್ವದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಪ್ರತಿಭಟನಾಕಾರರು ಗಂಭೀರ ಆರೋಪ ಮಾಡಿದ್ದಾರೆ.
ಈ ಬೃಹತ್ ಹಗರಣದ ಸಂಪೂರ್ಣ ನೈತಿಕ ಹೊಣೆ ಹೊರಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದರೊಂದಿಗೆ ಬಂಧನದಲ್ಲಿರುವ ಶಿಕ್ಷಣ ಪ್ರೇಮಿ ಸೋನಮ್ ವಾಂಗ್ಚುಕ್ ಅವರನ್ನು ಯಾವುದೇ ಷರತ್ತಿಲ್ಲದೆ ತಕ್ಷಣವೇ ಬಿಡುಗಡೆ ಮಾಡಬೇಕೆಂದು C.I.T.U ಬೆಳಗಾವಿ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳಾದ ಮಂದಾ ನೇವಗಿ, ದಿಲೀಪ್ ವಾಕರ್, ಜಿ.ಐ. ಕಾಗಣಿಕರ್ ಹಾಗೂ ಐನಾ ಶೇಖ್ ಅವರು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. Byte
