ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ಸ ಒಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನಪ್ಪಿದ್ದು, ಹಲವರಿಗೆ ಗಾಯವಾದ ಘಟನೆ ಧಾರವಾಡ ಹೊರವಲಯದ ಮರೆವಾಡ ಬಳಿ ನಡೆದಿದೆ.

ಧಾರವಾಡದಿಂದ ಸವದತ್ತಿ ಕಡೆ ಹೋಗುತ್ತಿದ್ದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೆಡರಿದ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರೆಲ್ಲರನ್ನ ಅಂಬ್ಯುಲೆನ್ಸ್ ಮೂಲಕ ಧಾರವಾಡದ ಜಿಲ್ಲಾಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನಡೆಸಲಾಗಿದೆ.
ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
