Belagavi

ಪ್ರಧಾನಮಂತ್ರಿ ಆವಾಸ್ ಯೋಜನೆ: ಕಾಂಗ್ರೆಸ್ ಸರ್ಕಾರದಿಂದ 1300 ಮನೆಗಳ ರದ್ದು ; ಶಾಸಕ ಅಭಯ್ ಪಾಟೀಲ್ ಗಂಭೀರ ಆರೋಪ

Share

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡವರಿಗಾಗಿ ಮಂಜೂರಾಗಿದ್ದ 1300ಕ್ಕೂ ಹೆಚ್ಚು ಮನೆಗಳನ್ನು ಪ್ರಸ್ತುತ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿದೆ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಅಭಯ್ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ‘ಜನವಿರೋಧಿ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ಆಡಳಿತ ಅವಧಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಒಟ್ಟು 1748 ಮನೆಗಳನ್ನು ಮಂಜೂರು ಮಾಡಲಾಗಿತ್ತು. ಇದರಲ್ಲಿ ಸುಮಾರು 450 ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉಳಿದ ಸುಮಾರು 1300 ಮನೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸಾಮಾನ್ಯವಾಗಿ ಪ್ರತಿ ವರ್ಷ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡವರಿಗಾಗಿ ಸುಮಾರು 1500 ಮನೆಗಳು ಮಂಜೂರಾಗಬೇಕಿತ್ತು. ಈ ಲೆಕ್ಕಾಚಾರದಂತೆ ಕಳೆದ 4 ವರ್ಷಗಳಲ್ಲಿ ಸುಮಾರು 4500 ಮನೆಗಳು ಬೆಳಗಾವಿ ದಕ್ಷಿಣ ಕ್ಷೇತ್ರಕ್ಕೆ ಸಿಗಬೇಕಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಹೊಸ ಮನೆಗಳನ್ನು ನೀಡದಿರುವುದಷ್ಟೇ ಅಲ್ಲದೆ, ಈ ಹಿಂದೆ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ಮನೆಗಳನ್ನೂ ರದ್ದುಗೊಳಿಸಿ ಬಡವರ ಹಕ್ಕನ್ನು ಕಸಿದುಕೊಂಡಿದೆ ಎಂದು ಶಾಸಕ ಅಭಯ್ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಬೈಟ್

Tags:

error: Content is protected !!