Vijaypura

ಬಿಜೆಪಿ ಪ್ರತಿಭಟನೆಗೆ ದಲಿತ ಸಂಘಟನೆಗಳ ವಿರೋಧ; ಕೆಲಕಾಲ ಉದ್ವಿಗ್ನ ಪರಿಸ್ಥಿತಿ

Share

ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ವಿಜಯಪುರ ನಗರದಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಗೆ ಪ್ರಗತಿಪರ ದಲಿತ ಸಂಘಟನೆಗಳು ಹಾಗೂ ಎಎಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಆರಂಭಿಸುತ್ತಿದ್ದಂತೆಯೇ, ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಆಗಮಿಸಿದ ಪ್ರಗತಿಪರ ದಲಿತ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ನೀಟ್ ಹೋರಾಟದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಕ್ರಮಗಳ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕಪ್ಪು ಬಟ್ಟೆ ಧರಿಸಿ ಬಿಜೆಪಿ ಪ್ರತಿಭಟನಾ ಸ್ಥಳದತ್ತ ತೆರಳಲು ಮುಂದಾದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ದಲಿತ ಸಂಘಟನೆಗಳ ಕಾರ್ಯಕರ್ತರ ನಡುವೆ ಮುಖಾಮುಖಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಎರಡೂ ಗುಂಪುಗಳನ್ನು ತಡೆದರು. ಮುನ್ನೆಚ್ಚರಿಕೆ ಕ್ರಮವಾಗಿ 15ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.

ಈ ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಬಿಜೆಪಿ ತನ್ನ ಪ್ರತಿಭಟನೆಯನ್ನು ಮುಂದುವರಿಸಿತು.

Tags:

error: Content is protected !!