ಬೆಳಗಾವಿಯ ಜನತೆಗೆ ಗುಣಮಟ್ಟದ ಡ್ರೈ ಫ್ರೂಟ್ಸ್, ಆರೋಗ್ಯಕರ ಸ್ನ್ಯಾಕ್ಸ್ ಹಾಗೂ ಆಮದು ಮಾಡಿದ ಪ್ರೀಮಿಯಂ ಚಾಕಲೇಟ್‌ಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ “ಆಲ್ ಅಬೌಟ್ ನಟ್ಸ್” ಮಳಿಗೆ ಟಿಳಕವಾಡಿಯ ಮಂಗಳವಾರ ಪೇಟೆಯಲ್ಲಿ ಶುಭಾರಂಭಗೊಂಡಿದೆ. ವಿವಿಧ ಗಣ್ಯರ ಸಮ್ಮುಖದಲ್ಲಿ ನಡೆದ ಈ ಉದ್ಘಾಟನಾ ಸಮಾರಂಭಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.


ನಗರದ ಟಿಳಕವಾಡಿಯ ಮಂಗಳವಾರ ಪೇಟೆಯಲ್ಲಿ ಆರಂಭಗೊಂಡಿರುವ “ಆಲ್ ಅಬೌಟ್ ನಟ್ಸ್” ಮಳಿಗೆ ಆರೋಗ್ಯಕರ ಆಹಾರ ಪದಾರ್ಥಗಳ ಪ್ರಿಯರಿಗೆ ಹೊಸ ತಾಣವಾಗಿ ಹೊರಹೊಮ್ಮಿದೆ.
ಮಳಿಗೆಯನ್ನು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಬಿ.ಎಲ್. ಸಂತೋಷ್, ಮಾಜಿ ಶಾಸಕ ಸಂಜಯ್ ಪಾಟೀಲ್, ಉತ್ತರ ಕ್ಷೇತ್ರದ ಶಾಸಕ ಅಭಯ್ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ, ಮಾಜಿ ಶಾಸಕ ಅನಿಲ್ ಬೇನಕೆ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ್, ಮುರಗೆಂದ್ರಗೌಡ ಪಾಟೀಲ್ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.

ಉದ್ಘಾಟನಾ ಸಮಾರಂಭದಲ್ಲಿ ಗಣ್ಯರು ಮಳಿಗೆಯ ವಿವಿಧ ವಿಭಾಗಗಳನ್ನು ವೀಕ್ಷಿಸಿ, ಉತ್ತಮ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಒಂದೇ ಸ್ಥಳದಲ್ಲಿ ಲಭ್ಯವಾಗುವಂತೆ ಮಾಡಿರುವ ಪ್ರಯತ್ನವನ್ನು ಶ್ಲಾಘಿಸಿದರು.
“ಆಲ್ ಅಬೌಟ್ ನಟ್ಸ್” ಮಳಿಗೆಯಲ್ಲಿ ನೂರಕ್ಕೂ ಹೆಚ್ಚು ಬಗೆಯ ಪ್ರೀಮಿಯಂ ಡ್ರೈ ಫ್ರೂಟ್ಸ್, ಆರೋಗ್ಯಕರ ನಮ್ಕೀನ್ಸ್, ವಿವಿಧ ಬಗೆಯ ಸೀಡ್ಸ್, ಖರ್ಜೂರ, ಒಣಹಣ್ಣುಗಳು, ಗಿಫ್ಟ್ ಪ್ಯಾಕ್‌ಗಳು ಹಾಗೂ ದೇಶ-ವಿದೇಶಗಳಿಂದ ಆಮದು ಮಾಡಲಾದ ಪ್ರೀಮಿಯಂ ಚಾಕಲೇಟ್‌ಗಳು ಗ್ರಾಹಕರಿಗೆ ಲಭ್ಯವಿವೆ.

ಗುಣಮಟ್ಟ, ತಾಜಾತನ ಮತ್ತು ಕೈಗೆಟುಕುವ ದರದಲ್ಲಿ ಉತ್ಪನ್ನಗಳನ್ನು ಒದಗಿಸುವ ಉದ್ದೇಶದಿಂದ ಈ ಮಳಿಗೆ ಆರಂಭಿಸಲಾಗಿದ್ದು, ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ಕುಟುಂಬಗಳಿಗೆ ಇದು ಉತ್ತಮ ಆಯ್ಕೆಯಾಗಲಿದೆ ಎಂದು ಸಂಸ್ಥೆಯ ಪ್ರತಿನಿಧಿಗಳು ತಿಳಿಸಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ವ್ಯಾಪಾರಿಗಳು, ಬಿಜೆಪಿ ಮುಖಂಡರು, ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಭಾಗವಹಿಸಿ ನೂತನ ಮಳಿಗೆಗೆ ಶುಭ ಹಾರೈಸಿದರು.
