
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಶ್ರೀ ಮಾತಂಗಿ ದೇವಿಯ ಮಂದಿರದ ಸ್ಲ್ಯಾಬ್ ಪೂಜಾ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನೆರವೇರಿತು.



ರಾಜ್ಯದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಚಿಕ್ಕೋಡಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರ ನಿರ್ದೇಶನ ಹಾಗೂ 10 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಈ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಡೋಲಿ ಗ್ರಾಮದ ಶ್ರೀ ಮಾತಂಗಿ ದೇವಿ ದೇವಸ್ಥಾನದ ನಿರ್ಮಾಣಕ್ಕಾಗಿ ಜಾರಕಿಹೊಳಿ ಕುಟುಂಬದ 10 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಇಂದು ಅದ್ಧೂರಿಯಾಗಿ ಸ್ಲ್ಯಾಬ್ ಹಾಕುವ ಪೂಜಾ ಕಾರ್ಯಕ್ರಮ ಜರುಗಿತು.

ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಕೆಪಿಸಿಸಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಸಚಿವರ ಆಪ್ತರಾದ ಮಲಗೌಡ ಪಾಟೀಲ, ದೇವಸ್ಥಾನ ಪಂಚ ಕಮಿಟಿ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದು ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿದರು.


