State

ದೆಹಲಿಯಲ್ಲಿ ಸಿಎಂ ಡಿಕೆಶಿ ಮಹತ್ವದ ಸಭೆ: ಮೇಕೆದಾಟು, ಮಹದಾಯಿ ನೀರಾವರಿ ಯೋಜನೆಗಳ ಸ್ಥಿತಿಗತಿ ಕುರಿತು ಸುದೀರ್ಘ ಚರ್ಚೆ!

Share

ರಾಜ್ಯದ ಪ್ರಮುಖ ಕುಡಿಯುವ ನೀರು ಹಾಗೂ ಜಲ ಸಂಪನ್ಮೂಲ ಯೋಜನೆಗಳ ಭವಿಷ್ಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಮಹತ್ವದ ವಿದ್ಯಮಾನ ಜರುಗಿದೆ. ಮೇಕೆದಾಟು ಮತ್ತು ಮಹದಾಯಿ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಸ್ಥಿತಿಗತಿ ಹಾಗೂ ಜಲಾಶಯಗಳ ನೀರಿನ ಮಟ್ಟದ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಉನ್ನತ ಮಟ್ಟದ ಸಮಾಲೋಚನೆ ನಡೆಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಈ ಸಭೆಯಲ್ಲಿ ಮೇಕೆದಾಟು ಮತ್ತು ಮಹದಾಯಿ ಯೋಜನೆಗಳ ಪ್ರಸ್ತುತ ಸ್ಥಿತಿಗತಿ, ಕಾನೂನು ಹೋರಾಟದ ಹಂತಗಳು ಹಾಗೂ ರಾಜ್ಯದ ಜಲಾಶಯಗಳಲ್ಲಿನ ನೀರಿನ ಲಭ್ಯತೆಯ ಕುರಿತು ಆಳವಾಗಿ ಪರಾಮರ್ಶಿಸಲಾಯಿತು. ಈ ಸಮಾಲೋಚನಾ ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಎಂ ಕಾರ್ಯದರ್ಶಿ ನಕುಲ್ ಹಾಗೂ ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಸೇರಿದಂತೆ ಕಾನೂನು ಮತ್ತು ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಯೋಜನೆಗಳನ್ನು ಶೀಘ್ರವಾಗಿ ಮುನ್ನೆಡೆಸುವ ಬಗ್ಗೆ ಪ್ರಮುಖ ಚರ್ಚೆಗಳನ್ನು ನಡೆಸಿದರು.

Tags:

error: Content is protected !!