Uncategorized

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ‘ಕರ್ನಾಟಕದ ಅವಿಭಾಜ್ಯ ಅಂಗ’ ಗೊತ್ತುವಳಿ ಮಂಡನೆಗೆ ಕನ್ನಡಪರ ಸಂಘಟನೆಗಳ ಪಟ್ಟು! ಕಾನೂನು ಪ್ರಕಾರ ಅಗತ್ಯ ಕ್ರಮ; ಸಚಿವ ಯತೀಂದ್ರ ಸಿದ್ಧರಾಮಯ್ಯ

Share

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ಗೊತ್ತುವಳಿಯನ್ನು ತಕ್ಷಣವೇ ಮಂಡಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರರು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಒಂದು ವೇಳೆ ಪಾಲಿಕೆಯಲ್ಲಿ ಈ ನಿರ್ಣಯ ಪಾಸ್ ಆಗದಿದ್ದರೆ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡುವಂತೆ ಒತ್ತಾಯಿಸಲಾಗಿದೆ.

ಬೆಳಗಾವಿಯಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕನ್ನಡಪರ ಹೋರಾಟಗಾರರು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರವು ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿ ಮಂಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಯಾವುದೇ ಕಾರಣಕ್ಕೂ ಪಾಲಿಕೆಯಲ್ಲಿ ಈ ಗೊತ್ತುವಳಿ ನಿರ್ಣಯ ಮಂಡನೆಯಾಗದೇ ಹೋದರೆ, ಅಂತಹ ಮಹಾನಗರ ಪಾಲಿಕೆಯನ್ನು ತಕ್ಷಣವೇ ಸೂಪರ್‌ಸೀಡ್ ಮಾಡಬೇಕೆಂದು ಹೋರಾಟಗಾರರು ಪಟ್ಟು ಹಿಡಿದರು.

ಕನ್ನಡಪರ ಸಂಘಟನೆಗಳ ಮನವಿಗೆ ಸ್ಪಂದಿಸಿ ಮಾತನಾಡಿದ ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಕಾರ್ಯದರ್ಶಿಗಳಿಗೆ ಪತ್ರ ತಲುಪಿದ್ದು, ವಿಷಯವನ್ನು ತಮ್ಮ ಗಮನಕ್ಕೆ ತಂದಿಲ್ಲವೆಂದ ಸಚಿವರು, ಶೀಘ್ರವೇ ಪೂರ್ಣ ಮಾಹಿತಿ ಪಡೆದು ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ಪಾಲಿಕೆಯಲ್ಲಿ ಗೊತ್ತುವಳಿ ಪಾಸ್ ಮಾಡುವ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ರೀತಿಯ ರಾಜಕೀಯ ಒತ್ತಡಗಳಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

Tags:

error: Content is protected !!