Belagavi

ಅನಗೋಳ: ಸಂತ ಮೀರಾ ಶಾಲೆಯ SSLC ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ!

Share

ಅನಗೋಳದ ಸಂತ ಮೀರಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮೆ ನಿಮಿತ್ತ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಶುಭ ಸಂದರ್ಭದಲ್ಲಿ SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಸಾಧನೆ ಗೈದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸನ್ಮಾನಿಸಲಾಯಿತು.

ಶಾಲೆಯ ಮಾಧವ ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಚಿನ್ಮಯ ಮಿಷನ್‌ನ ಸ್ವಾಮಿನಿ ಪ್ರಜ್ಞಾನಂದಜಿ, ಡಾ. ಜಯತೀರ್ಥ ಕುಲಕರ್ಣಿ, ಶಾಲೆಯ ಅಧ್ಯಕ್ಷ ಪರಮೇಶ್ವರ ಹೆಗಡೆ ಹಾಗೂ ಮುಖ್ಯೋಪಾಧ್ಯಾಯಿನಿ ಸುಜಾತಾ ದಪ್ತದಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ SSLC ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ ಮಾಡಿದ ಪೂರ್ವಿಕಾ ಶೆಟ್ಟಿ, ಶ್ರಾವಣಿ ಮೋರೆ, ಭಕ್ತಿ ಕುಂಭಾರ್ ಸೇರಿದಂತೆ ಹಲವು ವಿದ್ಯಾರ್ಥಿಗಳಿಗೆ ಸನ್ಮಾನ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಇದರೊಂದಿಗೆ ಎಂಟನೇ ಮತ್ತು ಒಂಬತ್ತನೇ ತರಗತಿಯ ಸಾಧಕ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಯಿತು. ಸಂಸ್ಥೆಯ ಶ್ರೇಷ್ಠ ಶಿಕ್ಷಕಿಯರಾದ ಶ್ಯಾಮಲ್ ದಡ್ಡಿಕರ್, ಮಾಯಾ ನಿಲಜ್ಕರ್ ಮತ್ತು ಸಿಬ್ಬಂದಿ ವರ್ಗದವರನ್ನೂ ಸಹ ಈ ಸಂದರ್ಭದಲ್ಲಿ ಗೌರವಿಸಿ ಶ್ಲಾಘಿಸಲಾಯಿತು.

Tags:

error: Content is protected !!