State

ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ ಕೆ ಶಿವಕುಮಾರ್

Share

ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

“ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸೋಮಣ್ಣ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ್ದು, ಅವರು ರಾಜ್ಯದ ಹಿತಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

“ಕರ್ನಾಟಕ ಕಾಂಗ್ರೆಸ್ ನಾಯಕರ ಬದಲು ದೆಹಲಿ ಸರ್ಕಾರವನ್ನು ಭೇಟಿ ಮಾಡಿ ಎಂದು ತಮಿಳುನಾಡು ಸಿಎಂ ವಿಜಯ್ ಅವರಿಗೆ ಡಿಎಂಕೆ ನಾಯಕ ಅನ್ಬುಮಣಿ ಸಲಹೆ ನೀಡಿರುವ ಬಗ್ಗೆ ಕೇಳಿದಾಗ, “ಆ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ನಮಗೆ ಪರಸ್ಪರ ಕಿತ್ತಾಟ ಮಾಡಲು ಇಷ್ಟವಿಲ್ಲ. ನೆಲದ ಕಾನೂನು ಇದೆ. ನಾವು ಪರಸ್ಪರ ಗೌರವಿಸಬೇಕು. ಇಡೀ ದೇಶ ಒಂದಾಗಿ ಕೆಲಸ ಮಾಡಬೇಕು” ಎಂದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಯಡಿಯೂರಪ್ಪನವರು ಕೂಡ ಸಚಿವ ಸಂಪುಟ ರಚನೆ ಮಾಡದೇ ಅಧಿಕಾರ ಮಾಡಿರಲಿಲ್ಲವೇ? ಆಗ ಅಪ್ಪ-ಮಗ ಅಧಿಕಾರವನ್ನು ಅನುಭವಿಸಲಿಲ್ಲವೇ?” ಎಂದು ಮರುಪ್ರಶ್ನಿಸಿದರು.

ಇನ್ನೊಂದೆಡೇ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ನೇತೃತ್ವದಲ್ಲಿ ರಾಜ್ಯದ ಬಿಜೆಪಿ ಸಂಸದರ ನಿಯೋಗದೊಂದಿಗೆ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ ಜಲ, ನೀರಾವರಿ ಮತ್ತು ಕುಡಿಯುವ ನೀರಿನ ಕುರಿತು ಚರ್ಚಿಸಲಾಯಿತು.
ರಾಜ್ಯದಲ್ಲಿ ಈ ವರ್ಷ ತೀವ್ರ ಮಳೆ ಕೊರತೆಯಾಗಿದ್ದು, ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿದೆ. ಕುಡಿಯುವ ನೀರಿಗೂ ತೀವ್ರ ಅಭಾವ ಎದುರಾಗಿ, ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಈ ಸಂದರ್ಭದಲ್ಲಿ ಸಚಿವರಿಗೆ ವಿವರಿಸಲಾಗಿದೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ , ಸಂಸದರಾದ ಗೋವಿಂದ ಕಾರಜೋಳ, ಪಿಸಿ ಗದ್ದಿಗೌಡರ್ , ಪಿ.ಸಿ ಮೋಹನ್ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತರಿದ್ದರು.

Tags:

error: Content is protected !!