Kittur

ಲಾರಿ ಢಿಕ್ಕಿ: ಕಿತ್ತೂರಿನಲ್ಲಿ ರಸ್ತೆ ದಾಟುತ್ತಿದ್ದ ಯುವಕ ದುರ್ಮರಣ

Share

ಚನ್ನಮ್ಮನ ಕಿತ್ತೂರು: ಇಲ್ಲಿನ ಪಟ್ಟಣದ ಬಸ್ ನಿಲ್ದಾಣದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

ಕಿತ್ತೂರು ಸಮೀಪದ ಕಲಭಾವಿ ಗ್ರಾಮದ ಶ್ರವಣಕುಮಾರ ಪಾರೀಶ ಕುರ್ಕುರೆ ಮೃತಪಟ್ಟ ದುರ್ದೈವಿ. ಮೃತ ಯುವಕ ಹುಬ್ಬಳ್ಳಿಯಿಂದ ಬಂದು ಕಿತ್ತೂರು ಬಸ್ ನಿಲ್ದಾಣದ ಬಳಿ ಹೆದ್ದಾರಿಯಲ್ಲಿ ಕೆಳಗಿಳಿದಿದ್ದನು. ಬಳಿಕ ರಸ್ತೆ ಅಡ್ಡದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಆತನಿಗೆ ನೇರವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಶ್ರವಣಕುಮಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಘಟನಾ‌ ಸ್ಥಳಕ್ಕೆ ಕಿತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!