Belagavi

ಮಾರ್ಕಂಡೇಯ ನದಿ ಉಕ್ಕಿ ಹರಿದು ಕಂಗ್ರಾಳಿಯ ಹಳೆಯ ಬ್ರಿಜ್ ಜಲಾವೃತ…

Share

ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ರಾಕಸಕೊಪ್ಪ ಜಲಾಶಯದ ಬಾಗಿಲುಗಳನ್ನು ತೆರೆಯಲಾಗಿದೆ. ಇದರಿಂದಾಗಿ ಮಾರ್ಕಂಡೇಯ ನದಿ ಮೈದುಂಬಿ ಹರಿಯುತ್ತಿದ್ದು, ಕಂಗ್ರಾಳಿ ಗ್ರಾಮದ ಹಳೆಯ ಸೇತುವೆ ಸಂಪೂರ್ಣ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ. ಇದರ ಪರಿಣಾಮವಾಗಿ ಮಾರ್ಕಂಡೇಯ ನದಿಯಲ್ಲಿ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ನದಿಯ ಭೋರ್ಗರೆತಕ್ಕೆ ಕಂಗ್ರಾಳಿ ಕೆ.ಎಚ್. ಬಳಿಯಿರುವ ಹಳೆಯ ಸೇತುವೆ ಈ ವರ್ಷದಲ್ಲೇ ಎರಡನೇ ಬಾರಿಗೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಇನ್ನು ನದಿಯ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪಾತ್ರ ದಾಟಿ ಸಮೀಪದ ನೂರಾರು ಎಕರೆ ಕೃಷಿ ಭೂಮಿಗೆ ನುಗ್ಗಿದೆ. ಇದರಿಂದಾಗಿ ರೈತರು ಬೆಳೆದಿದ್ದ ಅಪಾರ ಪ್ರಮಾಣದ ಬೆಳೆಗಳು ಜಲಾವೃತಗೊಂಡು ಹಾನಿಯಾಗುವ ಭೀತಿ ಎದುರಾಗಿದೆ. ಮಳೆ ಹೀಗೆಯೇ ನಿರಂತರವಾಗಿ ಮುಂದುವರಿದರೆ ನೀರು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ತಗ್ಗು ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ನದಿ ತೀರದ ಗ್ರಾಮಸ್ಥರಲ್ಲಿ ಈಗ ಆತಂಕದ ವಾತಾವರಣ ನಿರ್ಮಾಣವಾಗಿದೆ.

Tags:

error: Content is protected !!