Khanapur

ಕುಮಟಾ -ಹೊನ್ನಾವರದಲ್ಲಿ ಸಂಘಟನಾ ಸೈಜನ್ ಅಭಿಯಾನದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

Share

ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಕುಮಟಾ -ಹೊನ್ನಾವರ ವಿಧಾನಸಭಾ ಕ್ಷೇತ್ರದ ಕುಮಟಾ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಸಂಘಟನಾ ಸೈಜನ್ ಅಭಿಯಾನದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು ಈ ಸಂದರ್ಭದಲ್ಲಿ ಎಐಸಿಸಿ ವೀಕ್ಷಕರಾದ ರೊಸಲಿನಾ ಟಿರ್ಕೆ ಅವರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಮಾತನಾಡಿದ ಡಾಕ್ಟರ್ ಅಂಜಲಿ ಅವರು ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ತಲುಪಿಸಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಹೇಳುವುದರ ಮೂಲಕ ಪಕ್ಷದ ಸಂಘಟನೆಯಲ್ಲಿ ಉತ್ಸಾಹ ಹುಮ್ಮಸ್ಸು ಮೂಡಿಸಿದರು.

ಈ ಸಂದರ್ಭದಲ್ಲಿ ಕುಮಟಾ -ಹೊನ್ನಾವರ ವಿಧಾನಸಭಾ ಕ್ಷೇತ್ರದ ಮುಖಂಡರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬಹು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!