Chikkodi

ಕೊಯ್ನಾ ಜಲಾಶಯದಿಂದ 33 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಕೃಷ್ಣಾ, ದೂಧಗಂಗಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳ — ಪ್ರವಾಹ ಭೀತಿ

Share

ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಯ್ನಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ಹಂತ-ಹಂತವಾಗಿ 33 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ.

ಇದರಿಂದಾಗಿ ಗಡಿಭಾಗದ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕುಗಳಲ್ಲಿ ನದಿಗಳ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.ಕೊಯ್ನಾ ಜಲಾಶಯದ ನೀರು ಹಾಗೂ ಸ್ಥಳೀಯವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಗೆ ಉಭಯ ರಾಜ್ಯಗಳ ವಿವಿಧ ಮೂಲಗಳಿಂದ ಒಟ್ಟು 99 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ನದಿಯ ಪ್ರವಾಹ ಮಟ್ಟ ಏರಿಕೆಯಾಗಿದೆ.

Tags:

error: Content is protected !!