ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೆಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ಭಾನುವಾರ ಹುಬ್ಬಳ್ಳಿಯಲ್ಲಿ 24 ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರದ 55 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 19,500 ಅಭ್ಯರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.

ಧಾರವಾಡದ 31 ಹಾಗೂ ಹುಬ್ಬಳ್ಳಿಯ 24 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ ನಕಲು ರಹಿತ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ವೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರನ್ನು ನೇಮಕ ಮಾಡಲಾಗಿದೆ.
ವಿಶೇಷ ಜಾಗೃತ ದಳದ ಜತೆಗೆ, ವೆಬ್ಕಾಸ್ಟಿಂಗ್ ವೀಕ್ಷಣಾ ತಂಡವನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ವಸ್ತ್ರಸಂಹಿತೆ ಪರಿಶೀಲನೆ ನಡೆಸಿದರು.
ಸ್ವಯಂ ಸೇವಕರು, ನೋಡಲ್ ಅಧಿಕಾರಿಗಳು, ಪ್ರಿಸ್ಕಿಂಗ್ ಸಿಬ್ಬಂದಿ, ಕೊಠಡಿ ಮೇಲ್ವಿಚಾಕರು ಹಾಗೂ ಹೆಚ್ಚುವರಿ ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ವಹಿಸಿದ್ದಾರೆ
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್, ಕಂಪ್ಯೂಟರ್ ಸೆಂಟರ್, ಕೋಚಿಂಗ್ ಕ್ಲಾಸ್ ಕಾರ್ಯನಿರ್ವಹಿಸದಂತೆ ಆದೇಶ ಹೊರಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.
