State

ಸಚಿವ ಸಂಪುಟ ಕಸರತ್ತು: ಗಾಯತ್ರಿ ಶಾಂತೇಗೌಡಗೆ ಶಾಕ್: ಕೊನೆ ಕ್ಷಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಎಂಟ್ರಿ?

Share

ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ತೀವ್ರ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ನೂತನ ಸಚಿವರ ಪಟ್ಟಿಯಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಕೇಳಿಬರುತ್ತಿದ್ದಂತೆಯೇ ಪಕ್ಷದೊಳಗೆ ಅಪಸ್ವರ ಉಂಟಾಗಿದ್ದು, ಕೊನೆಯ ಕ್ಷಣದಲ್ಲಿ ಉಮಾಶ್ರೀ ಅಥವಾ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ.

ರಾಜ್ಯ ಕಾಂಗ್ರೆಸ್ ಸಂಪುಟ ವಿಸ್ತರಣೆಯ ಕೊನೆಯ ಕ್ಷಣದ ಕಸರತ್ತಿನಲ್ಲಿ ಭಾರೀ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ವಿಧಾನ ಪರಿಷತ್ತಿನ ಸದಸ್ಯರಾಗಿ ಇನ್ನೂ ಪ್ರಮಾಣವಚನ ಸ್ವೀಕರಿಸದ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡುವುದಕ್ಕೆ ಕಾಂಗ್ರೆಸ್ ಶಾಸಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಅದೇ ಸಮುದಾಯದಿಂದ ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿರುವುದರಿಂದ, ಗಾಯತ್ರಿ ಅವರಿಗೆ ಸಚಿವ ಸ್ಥಾನದ ಪ್ರಮಾಣವಚನ ಸ್ವೀಕರಿಸದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ. ಈ ನಡುವೆ, ಹೈಕಮಾಂಡ್ ಹಂತದಲ್ಲಿ ಮಂಕಾಳು ವೈದ್ಯ ಅವರ ಹೆಸರು ಕೈಬಿಟ್ಟು ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಅವಕಾಶ ನೀಡಿದಂತೆ, ಗಾಯತ್ರಿ ಶಾಂತೇಗೌಡ ಅವರ ಜಾಗಕ್ಕೆ ಮಹಿಳಾ ಕೋಟಾದಡಿಯಲ್ಲಿ ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ಉಮಾಶ್ರೀ ಅವರ ಹೆಸರು ಕೊನೆ ಕ್ಷಣದಲ್ಲಿ ಸೇರ್ಪಡೆಯಾಗುವ ತೀವ್ರ ಸಾಧ್ಯತೆಯಿದೆ.

Tags:

error: Content is protected !!