Belagavi

ಲಕ್ಷ್ಮಣ ಸವದಿ ಸಚಿವರಾಗಿ ಪ್ರಮಾಣವಚನ: ಬೆಳಗಾವಿಯಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

Share

ರಾಜ್ಯ ಸಚಿವ ಸಂಪುಟಕ್ಕೆ ಅಥಣಿ ಶಾಸಕ ಲಕ್ಷ್ಮಣ ಸವದಿ ಸೇರ್ಪಡೆಯಾಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

ಬೆಳಗಾವಿಯ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಲಕ್ಷ್ಮಣ ಸವದಿ ಪರ ಘೋಷಣೆಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಚಿವ ಸ್ಥಾನ ದೊರೆತಿರುವುದನ್ನು ಸಂಭ್ರಮದಿಂದ ಆಚರಿಸಿದರು.

2023ರ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಸಚಿವ ಸ್ಥಾನಕ್ಕಾಗಿ ಕಳೆದ ಹಲವು ತಿಂಗಳಿಂದ ನಿರಂತರ ಪ್ರಯತ್ನ ನಡೆಸಿದ್ದ ಅವರು, ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮೂಲಕ ತಮ್ಮ ರಾಜಕೀಯ ಪಯಣದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಗೂ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ ಸಿಕ್ಕಂತಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸವದಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಳಗಾವಿ ಜಿಲ್ಲೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಬೆಳಗಾವಿ ಜಿಲ್ಲಾ ಗಾಣಿಗ ಸಮಾಜದ ಮಹಿಳಾ ಅಧ್ಯಕ್ಷರಾದ ಶೋಭಾ ಗಾಣಿಗೇರ್ ತಿಳಿಸಿದ್ದಾರೆ. ಈ ನೀಡಲಾದ ಅವಕಾಶವು ಕೇವಲ ಬೆಳಗಾವಿ ಜಿಲ್ಲೆಯ ಗಾಣಿಗ ಸಮಾಜಕ್ಕೆ ಮಾತ್ರವಲ್ಲದೆ, ಇಡೀ ಕರ್ನಾಟಕದ ಸಮಸ್ತ ಗಾಣಿಗ ಸಮಾಜಕ್ಕೇ ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.

ಗಾಣಿಗ ಸಂಘದ ಅಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಮೇಶ್ ಉಟಗಿ ಅವರಿ ಕೊಟ್ಟ ಮಾತಿಗನುಗುಣವಾಗಿ ಸಚಿವ ಸ್ಥಾನ ನೀಡಿದ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಳಗಾವಿ ಜಿಲ್ಲಾ ಗಾಣಿಗ ಸಮಾಜದ ಪರವಾಗಿ ಕೃತಜ್ಞತೆ ಹಾಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಪ್ರಕಾಶ ಬಾಳೆಕುಂದ್ರಿ, ಕಲ್ಲಪ್ಪ ಗಾಣಿಗೇರ, ಅಶೋಕ ಶಿರೂರ, ಬಸವರಾಜ ಕೊಣ್ಣವರ, ಶಂಕರ ಗಾಣಗಿ, ಮಹಾದೇವ ಸಿದ್ದಣ್ಣವರ, ಶೋಭಾ ಗಾಣಿಗೇರ, ಮಾರುತಿ ಮೂಡಲಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:

error: Content is protected !!