Vijaypura

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Share

ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ವಿಜಯಪುರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಿತು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಬಬಲೇಶ್ವರ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಸೇರಿದಂತೆ ಪಕ್ಷದ ಹಲವು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.

Tags:

error: Content is protected !!