Belagavi

ಯಳೇಬೈಲ್‌ನಲ್ಲಿ ಬಸ್ ನಿಲ್ಲಿಸದ ಸಿಬ್ಬಂದಿ: ಪರೀಕ್ಷೆ ವೇಳೆಯಲ್ಲೇ ಆಕ್ರೋಶಗೊಂಡ ಗ್ರಾಮಸ್ಥರಿಂದ ಚಾಲಕ, ಕಂಡಕ್ಟರ್‌ ತರಾಟೆ!

Share

ಬೆಳಗಾವಿ ತಾಲೂಕಿನ ಯಳೇಬೈಲ್ ಗ್ರಾಮದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್ ಚಾಲಕ ಮತ್ತು ಕಂಡಕ್ಟರ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಪರೀಕ್ಷೆ ವೇಳೆಯಲ್ಲೇ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಬೇಕಾಬಿಟ್ಟಿ ವರ್ತಿಸುತ್ತಿದ್ದಾರೆ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬೆಳಗಾವಿ ತಾಲೂಕಿನ ಯಳೇಬೈಲ್ ಗ್ರಾಮದಲ್ಲಿ ನಿಗದಿಪಡಿಸಿದ ಬಸ್‌ಗಳು ಸರಿಯಾಗಿ ನಿಲ್ಲದೆ ತೆರಳುತ್ತಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ తీవ్ర ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಬಸ್ ತಡೆದು, ಸಿಬ್ಬಂದಿಯನ್ನು ನೇರವಾಗಿ ಪ್ರಶ್ನಿಸಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪರೀಕ್ಷೆಯ ಸಂದರ್ಭದಲ್ಲೇ ಬಸ್ ಸಿಬ್ಬಂದಿ ಬೇಕೆಂದೇ ಬಸ್ ನಿಲ್ಲಿಸುತ್ತಿಲ್ಲ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕೂಡಲೇ ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ನಿಯಮಿತ ಬಸ್ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags:

error: Content is protected !!