bagalkot

ಮುಧೋಳ ಶಾಸಕ ಆರ್. ಬಿ. ತಿಮ್ಮಾಪುರ ಬೆಂಬಲಿಗರಿಂದ ಲೋಕಾಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ!

Share

ಮುಧೋಳ ಶಾಸಕ ಆರ್. ಬಿ. ತಿಮ್ಮಾಪುರ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಲೋಕಾಪುರದಲ್ಲಿ ಆಕ್ರೋಶದ ಅಲೆ ಎದ್ದಿದೆ. ನಾಯಕನಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೋಪಗೊಂಡ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಶಾಸಕ ಆರ್. ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿ ಬಳಗ ಬೃಹತ್ ಪ್ರತಿಭಟನೆ ನಡೆಸಿತು. ಬೆಳಗಾವಿ-ಬಾಗಲಕೋಟೆ ಹೆದ್ದಾರಿಯನ್ನು ತಡೆದು ನಿಲ್ಲಿಸಿದ ಪ್ರತಿಭಟನಾಕಾರರು, ಆರ್. ಬಿ. ತಿಮ್ಮಾಪುರ ಅವರ ಭಾವಚಿತ್ರಗಳನ್ನು ಕೈಯಲ್ಲಿ ಹಿಡಿದು ಅವರ ಪರವಾಗಿ ಜೋರಾಗಿ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು. ಪ್ರಮುಖ ಹೆದ್ದಾರಿ ತಡೆಯಿಂದಾಗಿ ಕೆಲಕಾಲ ಸಂಚಾರ ಸಂಪೂರ್ಣ ಸಸ್ತಬ್ಧಗೊಂಡು ವಾಹನ ಸವಾರರು ಪರದಾಡುವಂತಾಯಿತು. ನಾಯಕನಿಗೆ ಸೂಕ್ತ ಅರ್ಹತೆ ಇದ್ದರೂ ಸಚಿವ ಸ್ಥಾನದಿಂದ ವಂಚಿಸಲಾಗಿದೆ ಎಂದು ಆರೋಪಿಸಿದ ಅಭಿಮಾನಿಗಳು, ತಕ್ಷಣವೇ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪದಾಧಿಕಾರಿಗಳು, ಆರ್. ಬಿ. ತಿಮ್ಮಾಪುರ ಅಭಿಮಾನಿ ಬಳಗದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು.

Tags:

error: Content is protected !!