ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಹುದ್ದೆಗಳ ಘೋಷಣೆ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದಲ್ಲಿ ಈವರೆಗೆ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಚರ್ಚೆಯಾಗಿಲ್ಲ; ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ವರಿಷ್ಠರು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಂಪುಟ ರಚನೆಯ ಸುತ್ತ ಚರ್ಚೆಗಳು ನಡೆಯುತ್ತಿರುವಾಗ, ಸಚಿವ ಸತೀಶ್ ಜಾರಕಿಹೊಳಿ ಅವರು ಹಲವಾರು ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಜಾಮೀನಿನ ಮೇಲೆ ಇರುವ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವ ಕುರಿತು ಪ್ರಶ್ನಿಸಿದಾಗ, ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಎಲ್ಲ ಹಿರಿಯರು ಚರ್ಚಿಸಿ ಇದನ್ನು ಮಾಡಿದ್ದಾರೆ, ಎಂದು ಸ್ಪಷ್ಟಪಡಿಸಿದರು.
ಉಪಮುಖ್ಯಮಂತ್ರಿಗಳ ಘೋಷಣೆ ಇನ್ನೂ ಆಗದಿರುವ ಬಗ್ಗೆ ಮಾತನಾಡಿದ ಅವರು, “ಪಕ್ಷದಲ್ಲಿ ಇದರ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಖಾತೆ ಹಂಚಿಕೆ ಮುಗಿದ ನಂತರ ಈ ಬಗ್ಗೆ ಚರ್ಚಿಸಲಾಗುವುದು. ಇದನ್ನು ಯಾವುದೇ ಸಮಯದಲ್ಲಿ ಮಾಡಬಹುದು,” ಎಂದು ತಿಳಿಸಿದರು. ಅಲ್ಲದೆ, ಕೆಲವು ಹುದ್ದೆಗಳಿಗೆ ಹಣ ನೀಡಿರಬಹುದು ಎಂಬ ಆಡಿಯೋ ವೈರಲ್ ಬಗ್ಗೆ, “ಇದು ಕೇವಲ ಊಹಾಪೋಹ. ಯಾರಿಗೆ ಹಣ ನೀಡಿದ್ದಾರೆಂದು ಅವರು ಹೇಳಲಿ,” ಎಂದು ತಳ್ಳಿಹಾಕಿದರು. ಮಹಿಳಾ ಮಂತ್ರಿಗಳ ಕೊರತೆಯ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, “ಮಹಿಳೆಯರಿಗಾಗಿ ಒಂದು ಸ್ಥಾನ ಖಾಲಿ ಇದೆ. ಮಹಿಳಾ ಪ್ರಾತಿನಿಧ್ಯ ಇಲ್ಲದೆ ಮಂತ್ರಿಮಂಡಲ ಆಗುವುದಿಲ್ಲ. ಹೈಕಮಾಂಡ್ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ,” ಎಂದು ಭರವಸೆ ನೀಡಿದರು. ಕೊರಟಗೆರೆ ರಾಜೀನಾಮೆ ವಿಚಾರ ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು ಎಂದರು.
ಇನ್ನು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಗೈರಿನ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ಧರಾಮಯ್ಯನವರು ಬೇಸರವಾಗಿರಬಹುದು. ಪಕ್ಷದ ವರಿಷ್ಠರು ಚರ್ಚೆ ಮಾಡುತ್ತಾರೆ ಎಲ್ಲವೂ ಸರಿಯಾಗುತ್ತದೆ ಎಂದರು.
ಇನ್ನು ರಾಜೀನಾಮೆ ನೀಡಿದರೇ ಅಂಗಿಕರಿಸುತ್ತೇವೆಂಬ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಅಸಮಾಧಾನಗೊಂಡವರನ್ನು ಸಮಾಧಾನವನ್ನು ಪಡಿಸುವ ಪ್ರಯತ್ನ ನಡೆಸಲಾಗುತ್ತಿದೆ. ಸಮಾಧಾನವೇ ಎಲ್ಲದ್ದಕ್ಕೂ ಪರಿಹಾರ. ಎಲ್ಲರಿಗೂ ಸಚಿವ ಸ್ಥಾನ ನೀಡಲೂ ಸಾಧ್ಯವಿಲ್ಲ. ಸಿಮೀತವಾಗಿ ಮಾಡಲೂ ಹೋದಾಗ ಸಚಿವ ಸಂಪುಟ ವಿಸ್ತರಣೆ ವೇಳೆ ಕೆಲ ಹಿರಿಯರು ಹೊರಗುಳಿದಿರುವುದು ನಿಜ ಎಂದರು.
