ಕೃಷಿ ಅಧಿಕಾರಿ ಹುದ್ದೆಗೆ ಬೇರೆ ಬೇರೆ ಪದವಿ ಪಡೆದ ವಿದ್ಯಾರ್ಥಿಗಳಿಗೆ ನೇಮಕಾತಿಯಲ್ಲಿ ಅವಾಕಾಶ ನೀಡಿರುವುದನ್ನು ಖಂಡಿಸಿ ಹಾಗೂ ಈ ನಿರ್ಧಾರ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ, ಧಾರವಾಡ ಕೃಷಿ ವಿವಿಯಲ್ಲಿ ವಿದ್ಯಾರ್ಥಿಗಳು ಸುಮಾರು 24 ದಿನಗಳಿಂದ ನಿರಂತರ ಹೋರಾಟಕ್ಕೆ ಕೊನೆಗೂ ಈಗ ಕೆಇಎ ಮಣಿದಿದ್ದು, ನೇಮಕಾತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ.

ಧಾರವಾಡ ಕೃಷಿ ವಿವಿ ಪ್ರವೇಶ ದ್ವಾರ ಸೇರಿ ಆಡಳಿತ ಭವನ ಮುಂಭಾಗದಲ್ಲಿ ಕೃಷಿ ವಿವಿ ವಿದ್ಯಾರ್ಥಿಗಳು ನಿರಂತರವಾಗಿ ಹೋರಾಟ ನಡೆಸಿದ್ದರು. 945 ಕೃಷಿ ಅಧಿಕಾರಿ ಹುದ್ದೆಗಳಿಗೆ ಕೆಇಎ ಬೇರೆ ಬೇರೆ ಪದವಿ ಪಡೆದ ವಿದ್ಯಾರ್ಥಿಗಳಿಗೂ ನೇಮಕಾತಿಯಲ್ಲಿ ಅವಕಾಶ ನೀಡಿರುವುದನ್ನು ವಿದ್ಯಾರ್ಥಿಗಳು ತೀವ್ರವಾಗಿ ಖಂಡಿಸಿದರು. ಈ ನಿರ್ಧಾರ ವಿರುದ್ಧ ಕೃಷಿ ವಿವಿಯಲ್ಲಿ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನು ಕೂಡಾ ನಡೆಸಿ ಕೆಲವು ವಿದ್ಯಾರ್ಥಿಗಳು ಅಸ್ತವ್ಯಸ್ತ್‌ಗೊಂಡಿದ್ದರು. ವಿದ್ಯಾರ್ಥಿಗಳ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಅರಿತುಕೊಂಡ ಕರ್ನಾಟಕ ಪರೀಕ್ಷೆ ಪ್ರಾಧಿಕಾರವು ಕೊನೆಗೂ ಈಗ ನೇಮಕಾತಿ ಪರೀಕ್ಷೆಯನ್ನು ಸದ್ಯ ರದ್ದು ಮಾಡಿ ಆದೇಶ ಹೊರಡಿಸಿದೆ. ಅಗಸ್ಟ್ 8 ಮತ್ತು 9ರಂದು ಲಿಖಿತ ಪರೀಕ್ಷೆ ನಿಗದಿ ಮಾಡಿರುವುದು ಈಗ ರದ್ದಾಗಿದೆ.
