Khanapur

ಖಾನಾಪೂರ ಬಿಜೆಪಿ ಕಚೇರಿಯಲ್ಲಿ ‘ಹರ್ ಘರ್ ತಿರಂಗಾ’ ಸಭೆ

Share

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪರಂಪರೆಯನ್ನು ಮುಂದುವರಿಸುತ್ತಾ, ಖಾನಾಪೂರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ವಿಶೇಷ ಸಭೆಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ಯೋಜನೆ ರೂಪಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಯಿತು.

ಖಾನಾಪೂರ ಬಿಜೆಪಿ ಕಚೇರಿಯಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರ ಸನ್ನಿಧಿಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ಕುರಿತು ಪ್ರಮುಖ ಸಭೆ ಜರುಗಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವಿಠ್ಠಲ ಹಲಗೇಕರ, ಪ್ರತಿಯೊಂದು ಮನೆಯಲ್ಲೂ ದೇಶಪ್ರೇಮದ ಭಾವನೆ ಮೂಡಿಸುವುದೇ ಈ ಅಭಿಯಾನದ ಮುಖ್ಯ ಉದ್ದೇಶವಾಗಿದ್ದು, ತಾಲೂಕಿನಲ್ಲಿ ಭವ್ಯ ತಿರಂಗಾ ರ್ಯಾಲಿ ಆಯೋಜಿಸಲಾಗುವುದು ಎಂದರು. ಆಗಸ್ಟ್ ೧೩ ರಿಂದ ೧೫ ರವರೆಗೆ ಪ್ರತಿಯೊಬ್ಬರೂ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ, ಆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವಂತೆ ಕರೆ ನೀಡಿದರು. ತಾಲೂಕಿನ ಬೂತ್ ಮಟ್ಟದಲ್ಲಿ ಧ್ವಜ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದ್ದು, ಕಾರ್ಯಕರ್ತರು ಒಗ್ಗೂಡಿ ಅಭಿಯಾನ ಯಶಸ್ವಿಗೊಳಿಸಲು ಮನವಿ ಮಾಡಿದರು. ಸಭೆಯಲ್ಲಿ ತಾಲೂಕಾ ಬಿಜೆಪಿ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಪ್ರಮೋದ್ ಕೊಚೇರಿ, ಸುರೇಶ್ ದೇಸಾಯಿ, ಬಾಬುರಾವ ದೇಸಾಯಿ, ಚೇತನ ಮಣೇರಿಕರ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:

error: Content is protected !!