ಸಚಿವರಾದ ಬಳಿಕ ಮೊದಲ ಬಾರಿಗೆ ಬಳ್ಳಾರಿ ನಗರಕ್ಕೆ ಆಗಮಿಸಿದ ಬಿ. ನಾಗೇಂದ್ರ ಅವರಿಗೆ ಕಾರ್ಯಕರ್ತರು ಬೃಹತ್ ಸೇಬಿನ ಹಾರ ಹಾಕಿ ಅತ್ಯಂತ ಅದ್ದೂರಿಯಾಗಿ ಸ್ವಾಗತ ಕೋರಿದರು. ನಗರಕ್ಕೆ ಆಗಮಿಸುತ್ತಿದ್ದಂತೆ ಕನಕದುರ್ಗಮ್ಮ ದೇವಸ್ಥಾನಕ್ಕೆ ತೆರಳಿದ ಸಚಿವರು, ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.


ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ಗಣಿನಾಡು ಬಳ್ಳಾರಿಗೆ ಭೇಟಿ ನೀಡಿದ ಸಚಿವ ಬಿ. ನಾಗೇಂದ್ರ ಅವರಿಗೆ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನಗರಕ್ಕೆ ಆಗಮಿಸುತ್ತಿದ್ದಂತೆ ಸಚಿವರು ಕನಕದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆವರಣದಲ್ಲಿ ಕಾರ್ಯಕರ್ತನೊಬ್ಬ ಜೀವದ ಹಂಗು ತೊರೆದು ಕ್ರೇನ್ ಮೂಲಕ ಆಂಜನೇಯನ ವೇಷಧಾರಿ ರೀತಿ ಆಗಮಿಸಿ, ಬೃಹತ್ ಗಾತ್ರದ ಸೇಬಿನ ಹಾರ, ಕೇಸರಿ ಶಾಲು ಹೊದಿಸಿ ಹಾಗೂ ಬೆಳ್ಳಿ ಗಧೆ ನೀಡಿ ಸಚಿವರನ್ನು ಸನ್ಮಾನಿಸಿದ ಸನ್ನಿವೇಶ ಸಾರ್ವಜನಿಕರ ಗಮನ ಸೆಳೆಯಿತು. ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಈ ಅದ್ದೂರಿ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

