ಖಾನಾಪುರ ತಾಲೂಕಿನ ನಂದಗಡ ಮತ್ತು ರಾಯಾಪುರದ ವಾಲ್ಮೀಕಿ ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಕಾರ್ಯ ಭರದಿಂದ ಸಾಗುತ್ತಿದೆ. ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಬಾಬು ಹತ್ತರವಾಡ ಅವರು ಖುದ್ದಾಗಿ ಸಿಬ್ಬಂದಿಯೊಂದಿಗೆ ಮನೆ ಮನೆಗೆ ತೆರಳಿ, ಅಗತ್ಯ ದಾಖಲೆಗಳನ್ನು ಒದಗಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಜ್ಯೋತಿ’ಯ ಫಲಾನುಭವಿಗಳ ಪರಿಶೀಲನಾ ಪ್ರಕ್ರಿಯೆ ಖಾನಾಪುರ ತಾಲೂಕಿನಾದ್ಯಂತ ನಡೆಯುತ್ತಿದ್ದು, ಪ್ರಾಧಿಕಾರದ ಸದಸ್ಯ ಬಾಬು ಹತ್ತರವಾಡ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸ್ವತಃ ಅಂಗಳಕ್ಕೆ ಇಳಿದಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರು ಮತ್ತು ಸಾರ್ವಜನಿಕರಲ್ಲಿ ಮಾಹಿತಿ ಕೊರತೆಯಿಂದಾಗಿ ಯೋಜನೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ, ಅವರು ಪ್ರತಿ ಮನೆಗೂ ಭೇಟಿ ನೀಡುತ್ತಿದ್ದಾರೆ. ಪರಿಶೀಲನೆಗೆ ಆಗಮಿಸುವ ಸಿಬ್ಬಂದಿಗೆ ಸೂಕ್ತ ದಾಖಲೆಗಳನ್ನು ನೀಡಿ ಸಹಕರಿಸುವಂತೆ ಮನೆಮಂದಿಗೆ ತಿಳಿಹೇಳುತ್ತಿರುವ ಅವರ ಈ ಕಾರ್ಯಪರತೆ ಹಾಗೂ ಸಾರ್ವಜನಿಕ ಕಾಳಜಿಗೆ ಸ್ಥಳೀಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
