Bailahongala

ತಲೆ ಮರೆಸಿಕೊಂಡಿದ್ದ ರೌಡಿನನ್ನು ಕೊನೆಗೂ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಬೈಲಹೊಂಗಲ ಪೊಲೀಸರು

Share

ಸಾರ್ವಜನಿಕರ ಮೇಲೆ ದಬ್ಬಾಳಿಕೆ ಮಾಡುತ್ತಾ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಸುಳ್ಳು ಕೇಸ್ ಹಾಕುವ ಬೆದರಿಕೆ ಒಡ್ಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನನ್ನು ಬಂಧಿಸುವಲ್ಲಿ ಬೈಲಹೊಂಗಲ ಪೊಲೀಸರು ಯಶಸ್ವಿಯಾಗಿದ್ದಾರೆ. ವಾರಂಟ್ ಜಾರಿಯಲ್ಲಿದ್ದರೂ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಈತನನ್ನು ಕಾರ್ಯಾಚರಣೆ ನಡೆಸಿ ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿರಂತರವಾಗಿ ಬೆದರಿಕೆ ಹಾಗೂ ದಬ್ಬಾಳಿಕೆ ಮಾಡುತ್ತಿದ್ದ ರೌಡಿಶೀಟರ್ ಶಿವಾನಂದ ಕೋಲಕಾರನನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಈತನ ವಿರುದ್ಧ ಸರ್ಕಾರಿ ಅಧಿಕಾರಿಗಳ ಮೇಲೆ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿದ ಗಂಭೀರ ಆರೋಪಗಳಿದ್ದವು. ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ವಾರಂಟ್ ಜಾರಿಯಾಗಿದ್ದರೂ, ತಲೆಮರೆಸಿಕೊಂಡಿದ್ದನು. ಖಚಿತ ಮಾಹಿತಿ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೈಲಹೊಂಗಲ ಠಾಣೆ ಪೊಲೀಸರು, ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

Tags:

error: Content is protected !!