ಬೆಳಗಾವಿಯ ಬಹುನಿರೀಕ್ಷಿತ ಯಳ್ಳೂರು ಕೇಬಲ್ ಕಾರ್ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದಾರೆ.


ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಗಡಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಅತ್ಯಂತ ದೀರ್ಘಕಾಲದಿಂದ ಬಾಕಿ ಇರುವ ಯಳ್ಳೂರು ಕೇಬಲ್ ಕಾರ್ ಯೋಜನೆಗೆ ಶೀಘ್ರ ಅಂತಿಮ ಅನುಮೋದನೆ ನೀಡುವಂತೆ ಕೋರಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡರೆ ಭಾಗಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸಿ ಸ್ಥಳೀಯರಿಗೆ ವ್ಯಾಪಾರ ಹಾಗೂ ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದು ಶಾಸಕರು ವಿವರಣೆ ನೀಡಿದ್ದು, ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವರು ಯೋಜನಾ ಸಮ್ಮತಿಗೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ.
