ವಿದೇಶ ಪ್ರವಾಸದಲ್ಲಿರುವ ಬೆಳಗಾವಿ ಜಿಲ್ಲೆಯ ಗೋಕಾಕ್ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿದೇಶಿ ನೆಲದಲ್ಲಿಯೂ ಭಾರತೀಯ ಸನಾತನ ಸಂಸ್ಕೃತಿ ಮತ್ತು ಧಾರ್ಮಿಕ ಮೌಲ್ಯಗಳನ್ನು ಎತ್ತಿಹಿಡಿಯುತ್ತಿರುವ ಆಶ್ರಮದ ಕಾರ್ಯವನ್ನು ಅವರು ಈ ವೇಳೆ ಮುಕ್ತಕಂಠದಿಂದ ಶ್ಲಾಘಿಸಿದರು.


ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಪವಿತ್ರ ರಾಮಾಯಣ ಮಹಾಕಾವ್ಯದ ಸೃಷ್ಟಿಕರ್ತ ಮಹರ್ಷಿ ವಾಲ್ಮೀಕಿ ಆಶ್ರಮಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಅವರು ವಾಲ್ಮೀಕಿ ಮಹರ್ಷಿಗಳ ದರ್ಶನ ಪಡೆದು ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಸಾಂಸ್ಕೃತಿಕ ಪರಂಪರೆಯನ್ನು ವಿದೇಶದಲ್ಲೂ ಸಜೀವವಾಗಿರಿಸಿರುವ ಭಾರತೀಯ ಸಮುದಾಯದ ಶ್ರಮವನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಡಾ. ಕಿರಣಕುಮಾರ ಹಿರೇಹಾಳ್, ರಾಜೀವ ಮೇತ್ರಿ, ಕೃಷ್ಣ ಪೂಜಾರ ಹಾಗೂ ವಿಜಯ ಮ್ಯಾಗೇರಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

