ಪೆಟ್ರೋಲ್ ಹಾಕಿಸುವ ವಿಚಾರಕ್ಕೆ ಮಾಜಿ ಕಾರ್ಪೊರೇಟರ್ ಲಕ್ಷ್ಮಣ ಗಂಡಗಾಳೆಕರ ಪೆಟ್ರೋಲ್ ಬಂಕ್‌ದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ಕೂಡ ಸೆರೆಯಾಗಿದೆ.

ಹುಬ್ಬಳ್ಳಿ ತೊರವಿ ಹಕ್ಕಲದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸುವ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಸಿಬ್ಬಂದಿ ಮೇಲೆ ಮಾಜಿ ಕಾರ್ಪೊರೇಟರ್ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಷ್ಟಕ್ಕೂ ಅಸಲಿ ವಿಚಾರ ಏನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
