Vijaypura

ವಿಜಯಪುರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ; ಸಚಿವ ಎಂ.ಬಿ.ಪಾಟೀಲ ಧ್ವಜಾರೋಹಣ

Share

ಐತಿಹಾಸಿಕ ನಗರಿ ವಿಜಯಪುರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಸಂಭ್ರಮದಿಂದ ಆಚರಿಸ ಲಾಯಿತು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ಬಳಿಕ ಸಚಿವ ಎಂ.ಬಿ. ಪಾಟೀಲ ಅವರು ತೆರೆದ ವಾಹನದಲ್ಲಿ ಆಕರ್ಷಕ ಕವಾಯತು ಪರೇಡ್ ವೀಕ್ಷಿಸಿದರು. ವಿವಿಧ ಪೊಲೀಸ್ ತುಕಡಿಗಳು ಹಾಗೂ ಶಾಲಾ- ಕಾಲೇಜು ವಿದ್ಯಾರ್ಥಿಗಳ ತಂಡಗಳು ಪರೇಡ್‌ನಲ್ಲಿ ಭಾಗವಹಿಸಿ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಕೆ. ಆನಂದ, ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಸಂಸದ ರಮೇಶ ಜಿಗಜಿಣಗಿ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಧ್ವಜಾರೋಹಣದ ಬಳಿಕ ಸಚಿವ ಎಂ.ಬಿ. ಪಾಟೀಲ ಅವರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡಿದರು. ನಂತರ ಶಾಲಾ ಮಕ್ಕಳಿಂದ ಆಕರ್ಷಕ ಕವಾಯತು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದೇಶಭಕ್ತಿ ಸಾರುವ ವಿವಿಧ ಪ್ರದರ್ಶನಗಳು ನಡೆದವು. ವಿದ್ಯಾರ್ಥಿಗಳ ಮನಮೋಹಕ ಪ್ರದರ್ಶನಗಳು ನೆರೆದಿದ್ದವರ ಗಮನ ಸೆಳೆದವು.

Tags:

error: Content is protected !!