ಖಾನಾಪುರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮ ಪಂಚಾಯಿತಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.


ಐತಿಹಾಸಿಕ ನಂದಗಡ ಗ್ರಾಮ ಪಂಚಾಯಿತಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಪಿಡಿಒ ಸಾಗರ ಕುಮಾರ್ ಬಿರಾದಾರ ಅವರು, ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು.ಗ್ರಾಮದ ಸಮಸ್ತ ಜನತೆಗೆ ಶುಭಾಶಯ ಕೋರುತ್ತಾ, “ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪಂಚಾಯಿತಿ ವತಿಯಿಂದ ಪ್ರಮುಖ ಗುರಿಗಳನ್ನು ಹೊಂದಲಾಗಿದ್ದು, ಇದಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಬೇಕು” ಎಂದು ಮನವಿ ಮಾಡಿದರು. ಕಾರ್ಯಕ್ರಮದ ಅಂಗವಾಗಿ ಉಪಸ್ಥಿತರಿದ್ದ ಶಾಲಾ ಮಕ್ಕಳಿಗೆ ಸಿಹಿ ವಿತರಿಸಿ ಪ್ರೋತ್ಸಾಹಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮಾಜಿ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು.
