ಬೆಳಗಾವಿ ತಾಲೂಕಿನ ಮೋದಗಾ ಗ್ರಾಮ ಪಂಚಾಯತಿಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಗಣ್ಯರು, ಅಧಿಕಾರಿಗಳು ಹಾಗೂ ಯೋಧರ ಸಮ್ಮುಖದಲ್ಲಿ ರಾಷ್ಟ್ರಧ್ವಜ ಹಾರಿಸಿ, ದೇಶಪ್ರೇಮದ ಸಂದೇಶ ಸಾರಲಾಯಿತು.


ಇಂದು ಬೆಳಗಾವಿ ತಾಲೂಕಿನ ಮೋದಗಾ ಗ್ರಾಮ ಪಂಚಾಯತಿ ಆವರಣದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಶುಭ ಸಂದರ್ಭದಲ್ಲಿ ಮೋದಗಾ ಪಿ ಕೆ ಪಿ ಎಸ್ ಸೊಸೈಟಿಯ ಅಧ್ಯಕ್ಷರು ಹಾಗೂ ಗ್ರಾಮದ ಹಿರಿಯರಾದ ಜಿ.ಜಿ. ಕಲ್ಲೂರ ಸಾಹುಕಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರಕಾಶ್ ಕುಡಚಿ, ಸಾಂಬ್ರಾ ಭಾರತೀಯ ವಾಯುಸೇನೆಯ ಅಧಿಕಾರಿಗಳು, ಪಂಚಾಯತಿಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಲಿ ಸದಸ್ಯರು, ಶಾಲಾ ಶಿಕ್ಷಕ-ಶಿಕ್ಷಕಿಯರು ಹಾಗೂ ಗ್ರಾಮದ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಧ್ವಜವಂದನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
