Chikkodi

ಚಿಕ್ಕೋಡಿಯಲ್ಲಿ ನೂತನ ಸಿಪಿಐ ಕಚೇರಿ ಉದ್ಘಾಟನೆ

Share

ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವೃತ್ತ ಪೊಲೀಸ್ ನಿರೀಕ್ಷಕರ (ಸಿಪಿಐ) ಕಚೇರಿಯನ್ನು ಶಾಸಕ ಗಣೇಶ ಹುಕ್ಕೇರಿ ಹಾಗೂ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಜಂಟಿಯಾಗಿ ಉದ್ಘಾಟಿಸಿದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಕೇಂದ್ರವಾಗಿದ್ದು, ಇಲ್ಲಿ ಇನ್ನೂ ಹಲವು ಇಲಾಖೆಗಳ ಕಟ್ಟಡಗಳ ಅವಶ್ಯಕತೆಯಿದೆ. ಅಗತ್ಯವಿರುವ ಕಟ್ಟಡಗಳನ್ನು ಸರ್ಕಾರದಿಂದ ಅತಿ ಶೀಘ್ರದಲ್ಲಿ ಮಂಜೂರು ಮಾಡಿಸಲು ಶ್ರಮಿಸಲಾಗುವುದು. ಅದರೊಂದಿಗೆ ಚಿಕ್ಕೋಡಿ ಪ್ರತ್ಯೇಕ ಜಿಲ್ಲಾ ಘೋಷಣೆ ಕುರಿತು ಕಲಾಪದಲ್ಲಿ ಧ್ವನಿ ಎತ್ತಲಾಗುವುದು. ಚಿಕ್ಕೋಡಿ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳನ್ನು ಸಂಪೂರ್ಣ ಹತೋಟಿಗೆ ತರಲು ಪ್ರಮುಖ ರಸ್ತೆ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ ಚಿಕ್ಕೋಡಿ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿಯ ವಸತಿ ಗೃಹಗಳ ನಿರ್ಮಾಣ ಕಾರ್ಯವನ್ನು ಅತಿ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಸುಭಾಶ ಸಂಪಗಾವಿ, ತಹಸೀಲ್ದಾರ್ ರಾಜೇಶ ಬುರ್ಲಿ, ಡಿವೈಎಸ್ಪಿ ಗೋಪಾಲ ಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ, ಪುರಸಭೆ ಮುಖ್ಯಾಧಿಕಾರಿ ಜಗದೀಶ ಈಟ್ಟಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ರಾಮಾ ಮಾನೆ, ಶಾಮ ರೇವಡೆ, ಪಿ.ಐ. ಕೂರೆ, ಅನಿಲ್ ಮಾನೆ, ಗುಲಾಬ ಬಾಗವಾನ, ಸಾಬೀರ್ ಜಮಾದಾರ, ವಿಶ್ವನಾಥ ಕಾಮಗೌಡ, ಅರ್ಜುನ ನಾಯಕವಾಡಿ ಸೇರಿದಂತೆ ಹಲವು ಸ್ಥಳೀಯ ನಾಯಕರು, ಪ್ರಮುಖರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Tags:

error: Content is protected !!