80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಅಭಿನವ ವಿದ್ಯಾ ಸಂಸ್ಥೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಹಾನಗರ ಪಾಲಿಕೆ ಸದಸ್ಯೆ ಕುಮಾರಿ ಆರತಿ ಶಹಾಪುರ ಭಾಗವಹಿಸಿದ್ದರು. ಅಭಿನವ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಮೋಹನ ದಳವಾಯಿ ಕಾರ್ಯಕ್ರಮದ ಗಣ್ಯ ಅಧ್ಯಕ್ಷತೆ ವಹಿಸಿದ್ದರು.

ಅಭಿನವ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಶ್ರೀ ಬಸವರಾಜ ಬಿರಾದಾರ, ಸುಭಾಷ್ ಕಂಡೇಕರ್ ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಬಾನಾ ಚಿತ್ತರಗಿ ಅವರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಕಿಯಾಗಿ ಶಿಕ್ಷಕಿ ಚೇತನಾ. ಪಿ ಅವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರೂಪಿಸಿದರು.
