Belagavi

ಶ್ರೀ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Share

ಬೆಳಗಾವಿಯ ಶ್ರೀ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕಿನ ಮುಖ್ಯ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಬ್ಯಾಂಕಿನ ಅಧ್ಯಕ್ಷೆ ಶ್ರೀಮತಿ ಸರಳಾ ಹೆರೇಕರ, ನಿರ್ದೇಶಕ ರಮೇಶ ಕಳಸಣ್ಣವರ ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯ ರಾಜಶೇಖರ ಚೊನ್ನದ ಅವರ ಗಣ್ಯ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು.

ಬೆಳಗಾವಿಯ ಶ್ರೀ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕಿನ ಮುಖ್ಯ ಶಾಖೆಯಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಲಾಯಿತು. ಈ ವೇಳೆ ಬ್ಯಾಂಕಿನ ಅಧ್ಯಕ್ಷೆ ಶ್ರೀಮತಿ ಸರಳಾ ಹೆರೇಕರ, ನಿರ್ದೇಶಕ ರಮೇಶ ಕಳಸಣ್ಣವರ ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯ ರಾಜಶೇಖರ ಚೊನ್ನದ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬ್ಯಾಂಕಿನ ಶಹಾಪುರ, ಕ್ಲಬ್ ರೋಡ್, ತಿಲಕವಾಡಿ, ಶಿವಬಸವ ನಗರ, ನೆಹರೂ ನಗರ, ರಾಮದುರ್ಗ, ರಾಮತೀರ್ಥ ನಗರ, ಮುಧೋಳ ಹಾಗೂ ಹುಬ್ಬಳ್ಳಿ ಶಾಖೆಗಳಲ್ಲಿಯೂ ನಿರ್ದೇಶಕರು, ಶಾಖಾ ಸಲಹಾ ಸಮಿತಿ ಸದಸ್ಯರು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

Tags:

error: Content is protected !!