Nandagad

ಶಿಸ್ತುಬದ್ಧ ನಡತೆಯಿಂದಷ್ಟೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ನಂದಗಡದಲ್ಲಿ ಹಿರಿಯ ಮುಖಂಡ ಸಿ.ಜಿ. ವಾಲಿ ಕರೆ

Share

ಖಾನಾಪುರ ತಾಲೂಕಿನ ನಂದಗಡದ ಬಸಪ್ಪಣ್ಣ ಅರಗಾವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸತ್ ಪದಗ್ರಹಣ ಸಮಾರಂಭ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಹಿರಿಯ ಮುಖಂಡ ಸಿ.ಜಿ. ವಾಲಿ, ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ಶಿಸ್ತು ಹಾಗೂ ಸಂಸ್ಕೃತಿಯನ್ನು ರೂಢಿಸಿಕೊಂಡು ಸಮಾಜದ ಉತ್ತಮ ಪ್ರಜೆಗಳಾಗಬೇಕೆಂದು ಕರೆ ನೀಡಿದರು.

ನಂದಗಡದ ಬಸಪ್ಪಣ್ಣ ಅರಗಾವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಸತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಸಿ.ಜಿ. ವಾಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ವೇಳೆ ನೂತನ ಸಂಸತ್ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಅವರು, “ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ನಡತೆ ಅತ್ಯಂತ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಸ್ತಿನ ಸಿಪಾಯಿಯಂತೆ ನಡೆದುಕೊಂಡಾಗ ಮಾತ್ರ ಜೀವನದಲ್ಲಿ ಅತ್ಯನ್ನತ ಸಾಧನೆ ಮಾಡಲು ಸಾಧ್ಯ” ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಪಿ.ಕೆ. ಪಾಟೀಲ, ಮಹಾಂತೇಶ ವಾಲಿ, ಶಿವಾನಂದ ಕಾಪಸೆ, ಮುಖ್ಯಗುರು ನೇಹಾ ದಲಾಲ ಸೇರಿದಂತೆ ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags:

error: Content is protected !!