Vijaypura

ಭೀಮಾತೀರದಲ್ಲಿ ಮತ್ತೊಂದು ಕೊಲೆ..!ನಿವೃತ್ತ ಶಿಕ್ಷಕನ ಭೀಕರ ಹತ್ಯೆ

Share

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು 63 ವರ್ಷದ ಸಿದ್ದಪ್ಪ ಅಂಜುಟಗಿ ಎಂದು ಗುರುತಿಸಲಾಗಿದೆ. ನಿವೃತ್ತ ಶಿಕ್ಷಕನನ್ನು ದುಷ್ಕರ್ಮಿಗಳು ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಇಂಡಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಲಭ್ಯವಾದ ಮಾಹಿತಿಗಳು ಹಾಗೂ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನಿವೃತ್ತ ಶಿಕ್ಷಕನ ಬರ್ಬರ ಹತ್ಯೆಯಿಂದ ಭೀಮಾತೀರದ ಜನರು ಬೆಚ್ಚಿಬಿದ್ದಿದ್ದಾರೆ. ಹತ್ಯೆಯ ಹಿಂದಿರುವ ಕಾರಣವೇನು? ಕೃತ್ಯ ಎಸಗಿದವರು ಯಾರು? ಎಂಬ ಪ್ರಶ್ನೆಗಳಿಗೆ ಪೊಲೀಸರ ತನಿಖೆಯಿಂದ ಉತ್ತರ ಸಿಗಬೇಕಿದೆ. ಇಂಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!